ಬೈಂದೂರು: ತಾಲೂಕಿನ ಏಳಜೀತಾ ಗ್ರಾಮದಲ್ಲಿ ಕಾರೊಂದು ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಸಂಭವಿಸಿದೆ.
ಕಾರಿನದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು ಬೈಂದೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇವರು ಉತ್ತರ ಕನ್ನಡದ ಗೋಕರ್ಣದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದರು.ಬೈಂದೂರು ತಾಲೂಕಿನ ಏಳಜಿತಾ ಗ್ರಾಮದ ಈ ತಿರುವು ಅಪಾಯಕಾರಿಯಾಗಿದ್ದು ಇಲ್ಲಿ ಸೂಚನಾ ಫಲಕವೂ ಇರಲಿಲ್ಲ.ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಪ್ರಪಾತಕ್ಕೆ ಬಿದ್ದಿದೆ.ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
Kshetra Samachara
22/07/2022 04:09 pm