ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಹೊಂಡಾಗುಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೊಂದು ಅಪಘಾತ: ಚಾಲಕಿ ಪಾರು!

ಕಾಪು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆಯಷ್ಟೆ ಪತ್ರಕರ್ತನ ಕಾರೊಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಮರಿಗೆ ಬಿದ್ದಿತ್ತು.ಈ ದುರ್ಘಟನೆ ಸಂಭವಿಸಿ 24 ಗಂಟೆನೊಳಗೆ ಮತ್ತೊಂದು ಇಂತಹದ್ದೇ ದುರ್ಘಟನೆ ಈ ಭಾಗದಲ್ಲಿ ಸಂಭವಿಸಿದೆ.

ಇಂದು ಬೆಳಿಗ್ಗೆ ರಸ್ತೆ ಹೊಂಡಕ್ಕೆ ಬಿದ್ದ ಕಾರು ಬಳಿಕ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಎರಡು ತುಂಡಾಗಿ ರಸ್ತೆಗೆ ಬಿದ್ದಿದೆ.ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿದ್ದರಿಂದ ಕಾರು ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ.

ಘಟನೆಯಲ್ಲಿ ಕಾರು ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲಕ್ಕೆ ಕೆಲಸಕ್ಕೆ ತೆರಳುತಿದ್ದ ವೇಳೆ ಈ ಘಟನೆ ಸಂಭವಿಸಿದೆ.

Edited By : Nagesh Gaonkar
PublicNext

PublicNext

23/07/2022 10:09 am

Cinque Terre

52.66 K

Cinque Terre

3

ಸಂಬಂಧಿತ ಸುದ್ದಿ