ಮಂಗಳೂರು: ನಗರದ ಕಂಕನಾಡಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ಘಟನೆ ನಿನ್ನೆ ರಾತ್ರಿ ನಡೆದಿದೆ.
ಈ ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಅಲ್ಲಿಯೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ರೈಲ್ವೆ ಸಿಬ್ಬಂದಿ ಕಾರ್ಯಾಚರಣೆ ಮಾಡಿ ರೈಲು ಬೋಗಿಗಳನ್ನು ತೆರವುಗೊಳಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Kshetra Samachara
23/07/2022 01:21 pm