ವಿಟ್ಲ: ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿವೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ.
ಮಂಗಳೂರು ಮೂಲದ ಆಟೋ ರಿಕ್ಷಾವೊಂದು ಮಾಣಿಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಕೆಲ ಕಾಲ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು.
Kshetra Samachara
23/07/2022 05:07 pm