ಕಾಪು: ಬಸ್ಸಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಕಾಪು ಪೇಟೆಯಲ್ಲಿ ನಡೆದಿದೆ.ಶಿರ್ವ ನಿವಾಸಿ, ಕೂಲಿ ಕಾರ್ಮಿಕ ಬಾಲಕೃಷ್ಣ ತೀವ್ರ ಗಾಯಗೊಂಡಿದ್ದು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸ್ ನಿಲ್ದಾಣದಲ್ಲಿದ್ದ ವ್ಯಕ್ತಿ ನೇರವಾಗಿ ಬಂದು ಬಸ್‌ನತ್ತ ಬಂದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಹಿಂಬದಿಯ ಚಕ್ರದಡಿಗೆ ಸಿಲುಕಿಯಾಗಿತ್ತು.
ಗಾಯಾಳುವಿನ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದ್ದು ಸ್ಥಳೀಯರು ಕೂಡಲೇ ಆತನನ್ನು ಬಸ್‌ನ ಅಡಿಯಿಂದ ಹೊರಕ್ಕೆ ತೆಗೆದು ಉಪಚರಿಸಿ, ಉಡುಪಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿಂದ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
29/07/2022 09:57 am