ಕಾರ್ಕಳ : ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿಯಲ್ಲಿ ಬೈಕ್ ಮತ್ತು ಪಿಕ್ ಅಪ್ ವಾಹನದ ನಡುವೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸಂಭವಿಸಿದೆ.
ಮೆನನ್ (20) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಕಾರ್ಕಳದಿಂದ ಬೆಳುವಾಯಿ ಕಡೆಗೆ ಸಾಗುತ್ತಿದ್ದ ಪಿಕ್‌ಅಪ್‌ಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಿದ್ಯಾರ್ಥಿ ನೆಲಕ್ಕೆಸೆಯಲ್ಪಟ್ಟಿದ್ದು, ಗಂಭೀರಗಾಯಗೊಂಡಿದ್ದ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆನನ್, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/07/2022 09:23 pm