ಮುಲ್ಕಿ:ರಾಷ್ತ್ರೀಯ ಹೆದ್ದಾರಿ 66 ರ ಪಾವಂಜೆ ಸೇತುವೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಗೆ ರಾಷ್ಟ್ರೀಯ ಹೆದ್ದಾರಿ ಪಾವಂಜೆ ಸೇತುವೆ ಬಳಿ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ.
ಈ ಸಂದರ್ಭ ಸ್ಕೂಟರ್ ಸಮೇತ ಸವಾರ ಅನಿಲ್ ಕುಮಾರ್ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸವಾರ ಅನಿಲ್ ಕುಮಾರ್ ರವರು ಸ್ಕೂಟರಿನಲ್ಲಿ ಮುಲ್ಕಿ ಕಡೆಗೆ ಹೋಗಿದ್ದವರು ಅಲ್ಲಿ ಕೆಲಸ ಮುಗಿಸಿಕೊಂಡು ಅದೇ ಸ್ಕೂಟರಿನಲ್ಲಿ ವಾಪಾಸು ಮಂಗಳೂರು ಕಡೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ
ಕಾರಿನ ಚಾಲಕಿ ನಿರ್ಲಕ್ಷ್ಯ ಚಾಲನೆ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
31/07/2022 11:03 am