ಕಾರ್ಕಳ: ಮಾಳ ಎಸ್.ಕೆ ಬಾರ್ಡರ್ ನ ಓಟೆಹಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿ ಒಂಬತ್ತು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಕ್ರೂಸರ್ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕ್ರೂಸರ್ನಲ್ಲಿದ್ದ 9 ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶೃಂಗೇರಿಯಿಂದ ಮಾಳ ಕಡೆ ಬರುತ್ತಿದ್ದ ಕ್ರೂಸರ್ ಹಾಗೂ ಮಾಳ ಕಡೆಯಿಂದ ಶೃಂಗೇರಿಗೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ಚಾಲಕ ಶ್ರೀಕಾಂತ್ ಹಾಗೂ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳ ಸಹಿತ 9 ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/08/2022 10:46 am