ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: ಎಣ್ಣೆ ಮಿಲ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ಸೊತ್ತು ಭಸ್ಮ

ಪಡುಬಿದ್ರಿ: ಪಡುಬಿದ್ರಿ ಕಣ್ಣಂಗಾರ್ ನಡ್ಸಾಲು ಗ್ರಾಮದ ಸುಶೀಲಾ ಗಾಣಿಗ ಮಾಲಕತ್ವದ ಗಾಣಿಗರ ಮಿಲ್‌ನಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸುಮಾರು 5 ಲಕ್ಷ ರೂ. ಗಳಿಗೂ ಅಧಿಕ ಮೌಲ್ಯದ ಕೊಬ್ಬರಿ, ತೆಂಗಿನ ಕಾಯಿ ಬೆಂಕಿಗಾಹುತಿಯಾಗಿದೆ. ಉಡುಪಿಯ ಅಗ್ನಿ ಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

10/08/2022 11:03 am

Cinque Terre

11.7 K

Cinque Terre

0