ಬೈಂದೂರು: ಬೈಕ್ ಅಪಘಾತಕ್ಕೀಡಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಂದೂರು ಸಮೀಪದ ಒತ್ತಿನೆಣೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಬೈಕ್ ಸವಾರನನ್ನು ಉತ್ತರಕನ್ನಡ ಜಿಲ್ಲೆಯ ಕುಮುಟಾದ ಮಾದನಗೇರಿ ನಿವಾಸಿ ಕರುಣಾಕರ ನಾಯ್ಕ್ (29) ಎಂದು ಗುರುತಿಸಲಾಗಿದೆ.
ಇನ್ನು ಬೈಕ್ ಸವಾರ್ ಕುಮುಟಾ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ.ಅತೀ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದ್ದು, ಬೈಕ್ ನೇರವಾಗಿ ರಸ್ತೆ ಪಕ್ಕದ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಹಾರಿ ಬಿದ್ದಿದೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
14/08/2022 12:22 pm