ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು!

ಕಡಬ: ಕುಟ್ರುಪಾಡಿ ಗ್ರಾಮ ಪಂಜಾಯತಿಯಿಂದ ಹಳೇ ಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿದರು. ಬಳಿಕ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ.

Edited By : Vijay Kumar
PublicNext

PublicNext

15/08/2022 11:37 am

Cinque Terre

41.61 K

Cinque Terre

6

ಸಂಬಂಧಿತ ಸುದ್ದಿ