ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ಸ್ಕಾರ್ಪಿಯೋ ಕಾರು ಪಲ್ಟಿಯಾಗಿ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾಗಲಕೋಟೆ ಕಡೆಯಿಂದ ಮಂಗಳೂರು ಕಡೆಗೆ ಸೋಮವಾರ ಮುಂಜಾನೆ ಬರುತ್ತಿದ್ದ ಸ್ಕಾರ್ಪಿಯೊ ಕಾರು ಹಳೆಯಂಗಡಿ ಜಂಕ್ಷನ್ ತಲುಪುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಗಿದೆ.
ಅಪಘಾತದಿಂದ ಕಾರು ಜಖಂಗೊಂಡಿದ್ದು ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಾಲಕ ನಿದ್ರೆ ಮಂಪರ್‌ನಲ್ಲಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಬಳಿಕ ಕ್ರೇನ್ ಮೂಲಕ ಕಾರನ್ನು ತೆರವುಗೊಳಿಸಲಾಯಿತು.
Kshetra Samachara
15/08/2022 03:28 pm