ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ಕಾರಿಗೆ ಡಿಕ್ಕಿ ಹೊಡೆದು ಇನ್ನೊಂದು ಕಾರು ಪರಾರಿಯಾಗಿದ್ದು ಅಪಘಾತಕ್ಕೀಡಾದ ಕಾರಿನಲ್ಲಿದ್ದ ಇಬ್ಬರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಗೊಂಡವರನ್ನು ಕಾರಿನ ಚಾಲಕ ಕಾರ್ನಾಡು ಕ್ಷೀರಸಾಗರ ಬಳಿಯ ನಿವಾಸಿ ಧೀರಜ್ ಮತ್ತು ರೋಷನ್ ಎಂದು ಗುರುತಿಸಲಾಗಿದೆ.
ಮುಲ್ಕಿ ಸಮೀಪದ ಕಾರ್ನಾಡ್ ಬೈಪಾಸ್ ಕ್ಷೀರಸಾಗರ ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಲ್ಕಿ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಭಾಗದಿಂದ ಐ ಟೆನ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತ ರಭಸಕ್ಕೆ ಕಾರು ಜಖಂಗೊಂಡು ಹೆದ್ದಾರಿ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಮೂರು ಬಾರಿ ಪಲ್ಟಿಯಾಗಿದೆ. ಈ ಸಂದರ್ಭ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.
ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪರಾರಿಯಾದ ಕಾರಿನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
Kshetra Samachara
15/08/2022 06:28 pm