ಬ್ರಹ್ಮಾವರ: ಉಪ್ಪೂರು ಗ್ರಾಮದ ಅಮ್ಮುಂಜೆ ರೈಲ್ವೆ ಓವರ್ ಬ್ರಿಡ್ಜ್ ಸಮೀಪ ಮಂಗಳವಾರ ರಿಕ್ಷಾಕ್ಕೆ ನಾಯಿ ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದ್ದು ರಿಕ್ಷಾ ಚಾಲಕ ಗಣೇಶ ಪೂಜಾರಿ (53) ಸಾವನ್ನಪ್ಪಿದ್ದಾರೆ.
ರಿಕ್ಷಾ ಹಾವಂಜೆ ಕಡೆ ತೆರಳುತ್ತಿದ್ದಾಗ ನಾಯಿಯೊಂದು ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ ತೀವ್ರ ಗಾಯಗೊಂಡ ರಿಕ್ಷಾ ಚಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆ, ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Kshetra Samachara
24/08/2022 10:54 am