ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದಿ ನಾಯಿಗಳ ದಾಳಿ; ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು!

ಮಣಿಪಾಲ: ಮಣಿಪಾಲದ ಮಣಿಪಾಲ ಅಕಾಡೆಮಿ ಸ್ಕೂಲಿನ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಇಂದು ನಡೆದಿದೆ. ಗಾಯಗೊಂಡ ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗಿದೆ. ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳ ತಿರುಗಾಟಕ್ಕೂ ಭೀತಿ ಎದುರಾಗಿದೆ. ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಬಹಳಷ್ಟು ನಡೆದಿವೆ. ಸಮಸ್ಯೆಯ ಮುಕ್ತಿಗಾಗಿ ನಗರಸಭೆ ತಕ್ಷಣ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ.

Edited By : Nirmala Aralikatti
PublicNext

PublicNext

24/08/2022 03:52 pm

Cinque Terre

17.13 K

Cinque Terre

0