ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬೈಕ್- ಸವಾರ ಸಾವು

ಉಡುಪಿ: ಬೈಕ್‌ವೊಂದು ಚರಂಡಿಗೆ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದೆ.

ಕೊಡವೂರಿನ ಲಿಯಾನ್ ವಿಲ್ಸನ್ ಅಮ್ಮನ್ನ ( 19) ಮೃತ ದುರ್ದೈವಿ. ವಿಲ್ಸನ್ ಅಂಬಲಪಾಡಿ ಕಡೆಯಿಂದ ಕಿನ್ನಿಮೂಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಲಿಯಾನ್‌ನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

31/08/2022 07:28 am

Cinque Terre

7.73 K

Cinque Terre

2

ಸಂಬಂಧಿತ ಸುದ್ದಿ