ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯ ಬಪ್ಪನಾಡು ಜಂಕ್ಷನ್ ಬಳಿ ಬೈಕ್ ಗೆ ಲಾರಿ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳು ಸವಾರನನ್ನು ಮುಲ್ಕಿ ಸಮೀಪದ ಅಕ್ಕಸಾಲಿಗರ ಕೇರಿ ನಿವಾಸಿ ನಾಗೇಶ್ ಕಾಂಚನ್(46) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಗಾಯಾಳು ನಾಗೇಶ್ ಕಾಂಚನ್ ರಾಷ್ತ್ರೀಯ ಹೆದ್ದಾರಿ ಬಪ್ಪನಾಡು ದೇವಳದ ದ್ವಾರದ ಬಳಿಯ ಡಿವೈಡರ್ ಸಮೀಪ ತಮ್ಮ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದ ಲಾರಿಯನ್ನು ಅದರ ಚಾಲಕ ಸಂದೀಪ್ ಎಂಬಾತನು ಮೋಟಾರ್ ಸೈಕಲಿನ ಹಿಂಬದಿಗೆ ಡಿಕ್ಕಿ ಪಡಿಸಿ ಅಪಘಾತ ಸಂಭವಿಸಿದೆ.
ಅಪಘಾತದಿಂದ ನಾಗೇಶ್ ರವರು ಮೋಟಾರ್ ಸೈಕಲ್ ಸಮೇತ ಡಾಮಾರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
01/09/2022 09:52 pm