ಕಾರ್ಕಳ: ಕುಕ್ಕುಂದೂರು ಗ್ರಾಮದ ಬೋಪಾಡಿ ಎಂಬಲ್ಲಿ ಬೈಕಿಗೆ ಲಾರಿಯೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಸಲ್ಮಾನ್ ಮೃತ ಬೈಕ್ ಸವಾರ. ಸಲ್ಮಾನ್ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ರಂಗನಪಲ್ಕೆ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಚಾಲಕ ಸಿದ್ಧಿಕ್ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಕಾರ್ಕಳ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಡಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಲ್ಮಾನ್ ಬಿದ್ದು, ಹೆಲ್ಮೆಟ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/09/2022 08:09 pm