ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ : ಮನೆಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ

ಸುಳ್ಯ: ಮನೆಗೆ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನವಾಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವರ್ನಾಡಿನ ಪರ್ಲಿಕಜೆ ಎಂಬಲ್ಲಿಂದ ವರದಿಯಾಗಿದೆ. ಐವರ್ನಾಡಿನ ಪರ್ಲಿಕಜೆ ಸುಧಾಕರ (47) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ಸುಧಾಕರರು ಮನೆಯಲ್ಲಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ತೆರಳಿದ್ದರು.

ಮನೆಯಲ್ಲಿ ಬೇರೆ ಯಾರೂ ಇಲ್ಲದ ಸಂದರ್ಭದಲ್ಲಿ ದುರ್ಘಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಬೆಂಕಿ ಮನೆಯ ಒಂದು ಭಾಗವನ್ನು ಸುಟ್ಟು ಹಾಕಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Abhishek Kamoji
Kshetra Samachara

Kshetra Samachara

07/09/2022 12:35 pm

Cinque Terre

4.53 K

Cinque Terre

0

ಸಂಬಂಧಿತ ಸುದ್ದಿ