ಉಡುಪಿ: ವೃದ್ದೆಯೊಬ್ವರು ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಹೆಬ್ರಿಯ ಮೂರಕೈ ನಿವಾಸಿ ವಸಂತಿ ಶೆಟ್ಟಿ(65) ಮೃತ ಮಹಿಳೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್, ರಸ್ತೆ ದಾಟುತ್ತಿದ್ದ ವಸಂತಿ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/09/2022 08:52 pm