ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ : ಬಾವಿಗೆ ಬಿದ್ದು ನರಳಾಡುತ್ತಿದ್ದ ಯುವತಿಯ ರಕ್ಷಣೆ

ವಿಟ್ಲ : ಆಕಸ್ಮಿಕವಾಗಿ ಕಾಲುಜಾರಿ 50 ಅಡಿ ಆಳದ ಪಾಳು ಬಾವಿಗೆ ಬಿದ್ದು ಯುವತಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ.

ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಇವರನ್ನು ಸಂಪರ್ಕಿಸಿದ್ದು, ತಕ್ಷಣ ಸ್ಪಂದಿಸಿದ ಮುರಳೀ ವಿಟ್ಲ ಮತ್ತು ತಂಡದವರು ಯುವತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಬಳಿಕ ಗಂಭೀರ ಗಾಯಗೊಂಡ ಯುವತಿಯನ್ನು ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತೆಗೆ ದಾಖಲಿಸಿದ್ದಾರೆ.

ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಈ ರಕ್ಷಣಾ ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Edited By :
Kshetra Samachara

Kshetra Samachara

14/09/2022 07:09 pm

Cinque Terre

7.79 K

Cinque Terre

0

ಸಂಬಂಧಿತ ಸುದ್ದಿ