ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಅಪಘಾತದಲ್ಲಿ ಸಾಮಾಜಿಕ ಹೋರಾಟಗಾರ ಸಾವು, ಪತ್ನಿಗೆ ಗಾಯ

ಬೈಂದೂರು: ಬೈಂದೂರು ಹಿತರಕ್ಷಣಾ ವೇದಿಕೆ ಅಧ್ಯಕ್ಷ, ಸಾಮಾಜಿಕ ಹೋರಾಟಗಾರ ಜಗದೀಶ ಪಟವಾಲ್ (58) ಅವರು ಯಡ್ತರೆ ಬೈಪಾಸ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಜಗದೀಶ ಪಟವಾಲ್ ಅವರು ಪತ್ನಿಯೊಂದಿಗೆ ಬಿಜೂರಿನಿಂದ ಬೈಂದೂರಿಗೆ ಬರುತ್ತಿರುವಾಗ ಯಡ್ತರೆ ಬೈಪಾಸ್‌ ಬಳಿ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಜಗದೀಶ ಪಟವಾಲ್ ಗಂಭೀರ ಗಾಯಗೊಂಡಿದ್ದು, ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ತೀವ್ರ ಗಾಯಗೊಂಡ ಅವರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅವರ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಗಾಯಗೊಂಡಿದ್ದು, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಂದೂರಿನಲ್ಲಿ ನಾಗರಿಕ ಹಿತರಕ್ಷಣ ವೇದಿಕೆ ಹುಟ್ಟು ಹಾಕಿ ಬೈಂದೂರು ತಾಲೂಕು ರಚನೆ, ಮಿನಿ ವಿಧಾನಸೌಧ, ಅಗ್ನಿಶಾಮಕ ಠಾಣೆ, ನ್ಯಾಯಾಲಯ, ಪಟ್ಟಣ ಪಂಚಾಯತ್‌ ರಚನೆ ಸೇರಿದಂತೆ ಬೈಂದೂರು ಅಭಿವೃದ್ಧಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದರು.ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Edited By : PublicNext Desk
Kshetra Samachara

Kshetra Samachara

24/09/2022 09:08 am

Cinque Terre

7.18 K

Cinque Terre

0

ಸಂಬಂಧಿತ ಸುದ್ದಿ