ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಕಿರು ಸೇತುವೆ ಬಳಿ ಆಕಳಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದೆ. ಮಂಗಳೂರಿನ ಕದ್ರಿಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ನೊವಾ ಕಾರಿಗೆ ಪಡುಪಣಂಬೂರು ಕಿರು ಸೇತುವೆ ಬಳಿ ಏಕಾಏಕಿ ಆಕಳವೊಂದು ಅಡ್ಡ ಬಂದಿದೆ. ಈ ಸಂದರ್ಭ ಚಾಲಕ ಅಪಘಾತವನ್ನು ತಪ್ಪಿಸಲು ಯತ್ನಿಸಿದರೂ ಫಲಕಾರಿಯಾಗದೆ ಕಾರು ಆಕಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗಕ್ಕೆ ಹಾನಿಯಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಸಾಮಾಜಿಕ ಕಾರ್ಯಕರ್ತ ತೇಜಪಾಲ್ ಮತ್ತಿತರರು ಮಾನವೀಯತೆ ಮೆರೆದು ಟೆಂಪೋ ಮೂಲಕ ಆಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
PublicNext
30/09/2022 01:08 pm