ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಸ್ಕೂಟರ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.
ಗಾಯಾಳು ಸ್ಕೂಟರ್ ಸವಾರನನ್ನು ಉಡುಪಿ ಜಿಲ್ಲೆಯ ಫಲಿಮಾರು ನಿವಾಸಿ ಪ್ರೀತಮ್(22) ಎಂದು ಗುರುತಿಸಲಾಗಿದೆ.
ಸ್ಕೂಟರ್ ಸವಾರ ಪ್ರೀತಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆಯಿಂದ ಬಂದು ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬಲ ಬದಿಗೆ ಹೆದ್ದಾರಿ ಕ್ರಾಸ್ ಮಾಡುತ್ತಿರುವಾಗ ಸೂರಿಂಜೆ ಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಸ್ಕೂಟರ್ ಹಾಗೂ ಕಾರಿಗೆ ಹಾನಿಯಾಗಿದ್ದು ಕಾರು ಚಾಲಕ ರವೀಂದ್ರ ಹಾಗೂ ಸವಾರ ಪ್ರೀತಮ್ ನಡುವೆ ಮಾತಿನ ಚಕಮಕಿ ನಡೆದು ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕೂಡಲೇ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.
ಕಳೆದ ಕೆಲ ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಅರ್ಧಂಬರ್ಧ ನಡೆದಿದ್ದು ಮುಲ್ಕಿ ವಿಜಯ ಸನ್ನಿಧಿ, ಬಪ್ಪನಾಡು, ಬಸ್ ನಿಲ್ದಾಣ ಜಂಕ್ಷನ್ ಬಳಿ ಅನೇಕ ಅಪಘಾತಗಳು ಸಂಭವಿಸಿದೆ.
PublicNext
03/10/2022 08:42 pm