ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಬೀಚ್ ನಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು!

ಮಲ್ಪೆ: ಉಡುಪಿಯ ಮಲ್ಪೆ ಬೀಚ್ ನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.ಆದರೆ ಇವರಿಬ್ಬರು ತೀವ್ರ ಅಸ್ವಸ್ಥಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಆಪದ್ಭಾಂಧವ ಈಶ್ವರ್ ಮಲ್ಪೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರೂ ಪ್ರವಾಸಿಗರು ಮೈಸೂರಿನಿಂದ ಬೀಚ್ ಗೆ ಬಂದಿದ್ದರು. ಮೊದಲ ಪ್ರಕರಣದಲ್ಲಿ ತೌಸೀಫ್ ಎಂಬವರು ಈಜಲೆಂದು ನೀರಿಗಿಳಿದಿದ್ದರು.

ಇವರು ಅಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಸಂದರ್ಭ ರಕ್ಷಿಸಲಾಯಿತು.ಇನ್ನೊಂದು ಪ್ರಕರಣದಲ್ಲಿ ಮೈಸೂರಿನಿಂದ ಬಂದಿದ್ದ ಅಬ್ರಾರ್ ಅಹ್ಮದ್ ಎಂಬವರು ಅದೇ ರೀತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದಾಗ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಇವರಿಬ್ಬರ ಸ್ಥಿತಿ ಚಿಂತಾಜನಕವಾಗಿರುವುದಾಗಿ ಮುಳುಗು ತಜ್ಞ ಈಶ್ವರ್ ಮಲ್ಪೆ ಮಾಹಿತಿ ನೀಡಿದ್ದಾರೆ.

Edited By : Manjunath H D
PublicNext

PublicNext

04/10/2022 06:38 pm

Cinque Terre

51.9 K

Cinque Terre

2