ಮಲ್ಪೆ: ಉಡುಪಿಯ ಮಲ್ಪೆ ಬೀಚ್ ನಲ್ಲಿ ಮಂಗಳವಾರ ಸಂಜೆ ವೇಳೆ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗ ರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ. ಅಸ್ವಸ್ಥಗೊಂಡಿದ್ದ ಪ್ರವಾಸಿಗರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ರಜಾ ದಿನವಾದ ಮಂಗಳವಾರ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮಲ್ಪೆ ಬೀಚ್ ಗೆ ಬಂದಿದ್ದರು. ಅದರಲ್ಲಿ ಮೈಸೂರಿನಿಂದ ಬಂದ ತಂಡದಲ್ಲಿ ತೌಸೀಫ್ ಎಂಬವರು ಈಜಲೆಂದು ನೀರಿಗಿಳಿದಿದ್ದರು.
ಇವರು ಅಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಸಂದರ್ಭ ಈಶ್ವರ ಮಲ್ಪೆ ನೇತೃತ್ವದ ತಂಡ ರಕ್ಷಿಸಿತ್ತು. ಇನ್ನೊಂದು ಪ್ರಕರಣದಲ್ಲಿ ಮೈಸೂರಿನಿಂದ ಬಂದಿದ್ದ ಅಬ್ರಾರ್ ಅಹ್ಮದ್ ಎಂಬವರು ಅದೇ ರೀತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದಾಗ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಿಬ್ಬರಲ್ಲಿ ಓರ್ವ ಪ್ರವಾಸಿಗ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
Kshetra Samachara
05/10/2022 09:30 am