ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡುಬಿದ್ರಿ ಬೀಡಿನ ಬಳಿ ಸಮುದ್ರ ತಡೆಗೋಡೆಗೆ ಬಳಸುವ ಕಲ್ಲುಗಳನ್ನು ಹೇರಿಕೊಂಡು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಹೆದ್ದಾರಿಯಲ್ಲಿ ಹೆಚ್ಚಿನ ವಾಹನಗಳು ಚಲಿಸದೆ ಇದ್ದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಅವಘಡ ಸಂಭವಿಸುವುದು ತಪ್ಪಿದೆ. ಅವಘಡದಲ್ಲಿ ಟಿಪ್ಪರ್ ಚಾಲಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾನೆ.
Kshetra Samachara
09/10/2022 03:51 pm