ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಏಕಾಏಕಿ ರೈಲು ಇಂಜಿನ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರ!

ಕಡಬ: ನಗರದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಣದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ನಡೆದಿದ್ದ ತನ್ನ ಮಗಳು ಭಾಗವಹಿಸಿದ್ದ, ಕ್ರೀಡಾಕೂಟಕ್ಕೆ ತೆರಳಿ ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಎಂಬವರ ಜೊತೆ ಬಂದಿಳಿದಿದ್ದರು. ಬಳಿಕ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಇಂಜಿನ್ ಬಂದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಒಂದು ಕೈ ಮತ್ತು ಕಾಲು ನಷ್ಟವಾಗಿ ರೈಲ್ವೆ ಹಳಿ ಬದಿಗೆ ಎಸೆಯಲ್ಪಟ್ಟು ಗಂಭೀರ ಗಾಯದೊಂದಿಗೆ ಸಾವಿನ ದವಡೆಯಿಂದ ಪಾರಾಗಿದ್ದಾರೆ.

Edited By : Abhishek Kamoji
Kshetra Samachara

Kshetra Samachara

10/10/2022 10:50 pm

Cinque Terre

16.36 K

Cinque Terre

0