ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಮನೆಯಲ್ಲಿ ಆಕಸ್ಮಿಕ ಬೆಂಕಿ; ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಮಣಿಪಾಲ: ಮಣಿಪಾಲದ ವಿವೇಕಾನಂದನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ‌ ಕಾಣಿಸಿಕೊಂಡಿದ್ದು ಲಕ್ಷಾಂತರ ರೂ.ನಷ್ಟ ಉಂಟಾಗಿದೆ. ಆಟೋ ಚಾಲಕ ರವಿರಾಜ್ ಎಂಬವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ನೆರೆಹೊರೆಯವರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳ‌ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂಸಿಸುವ ಕಾರ್ಯಕ್ಕೆ ಮುಂದಾದ್ರು.

ಘಟನೆ ನಡೆದಾಗ ರವಿರಾಜ್ ಅವರ ಪತ್ನಿ ಮಣಿಪಾಲಕ್ಕೆ ಕೆಲಸಕ್ಕೆ ತೆರಳಿದ್ದರು ಎಂದು ಹೇಳಲಾಗ್ತಿದೆ. ಇನ್ನು ಅವಘಡದಲ್ಲಿ ಮನೆಯ ಪೀಠೋಪಕರಣ ಸೇರಿದಂತೆ ಸುಮಾರು 2 ಲಕ್ಷ ರೂ.ಗಳ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮಣಿಪಾಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

12/10/2022 06:27 pm

Cinque Terre

10.09 K

Cinque Terre

1