ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉದ್ಯಾವರ: " ಯುವಕರು ಕೃಷಿ ಬಗ್ಗೆ ಆಸಕ್ತರಾದರೆ ಬದುಕಿನಲ್ಲಿ ಖುಷಿ"

ಉಡುಪಿ: ಕೃಷಿ ಕುಟುಂಬದಿಂದ ಬಂದ ಯುವಕರು ಕೃಷಿ ಬಗ್ಗೆ ಆಸಕ್ತಿ ವಹಿಸದೇ ಇರುವುದರಿಂದ ಕೃಷಿ ಭೂಮಿ ಪಾಳು ಬಿದ್ದಿವೆ. ರೈತ ಕಷ್ಟಪಟ್ಟರೆ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ. ರೈತ ದೇಶದ ಬೆನ್ನೆಲುಬು ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತದ ಕುಲಪತಿ ವಂ.ಫಾ.ಸ್ಟ್ಯಾನಿ ಬಿ.ಲೋಬೊ ಹೇಳಿದರು.

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿ ವತಿಯಿಂದ ಉದ್ಯಾವರದಲ್ಲಿ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಕಡೆಕಾರು-ಕುತ್ಪಾಡಿ, ಅಲೆವೂರು ಗ್ರಾಪಂ ವ್ಯಾಪ್ತಿಯ 76 ಕೃಷಿ ಕುಟುಂಬಗಳನ್ನು ಹಾಗೂ ಮೂವರು ಅಶಕ್ತರನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್. ಕೆಂಪೇಗೌಡ ಕಂಬಳದ ಕೋಣಗಳನ್ನು ಗದ್ದೆಗೆ ಇಳಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉದ್ಯಾವರದ ಪಶು ವೈದ್ಯಾಧಿಕಾರಿ ಡಾ.ಸಂದೀಪ್ ಕುಮಾರ್, ಉಡುಪಿ ತಾಲೂಕು ಕಿಸಾನ್ ಘಟಕದ ಅಧ್ಯಕ್ಷ ಸುಭಾಷಿತ್ ಕುಮಾರ್, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಕನ್ನರ್ಪಾಡಿ ಶ್ರೀಜಯದುರ್ಗಾ ಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮೊದಲಾದವರು ಇದ್ದರು.

Edited By : Nagaraj Tulugeri
Kshetra Samachara

Kshetra Samachara

10/11/2020 09:08 am

Cinque Terre

22.21 K

Cinque Terre

2

ಸಂಬಂಧಿತ ಸುದ್ದಿ