ಮಂಗಳೂರು: ಡೀಸೆಲ್ ಮತ್ತು ಪೆಟ್ರೋಲ್ ದರ ಸಹಿತ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟಲಾಗದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರಕಾರವು ಜನಸಾಮಾನ್ಯರ ಮೇಲೆ ಕನಿಕರ ವೇ ಇಲ್ಲದ ಸರಕಾರವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹರಿಹಾಯ್ದಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರಕ್ಕೇರಿದ ಬಿಜೆಪಿಯು ಜನರ ಹಿತ ಕಾಪಾಡುವ ಬದಲು ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕಾರ್ಯನಿರ್ವಹಿಸುವ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ.
ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೂ ಕೂಡ ಬೆಲೆ ಏರಿಕೆಗೆ ಕಡಿವಾಣ ಹಾಕದೆ, ಯುಪಿಎ ಸರಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಕೇಂದ್ರ ಸರಕಾರದ ಈ ಧೋರಣೆ ಮತ್ತು ನುಣುಚಿಕೊಳ್ಳುವ ಕೃತ್ಯವನ್ನು ಖಂಡಿಸಿ ದೊಡ್ಡಮಟ್ಟದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗುವುದು ಎಂದು ಎಚ್ಚರಿಸಿದರು.
Umesh
Kshetra Samachara
19/02/2021 09:17 pm