ಉಡುಪಿ: ಉಡುಪಿಯಲ್ಲಿ ದೊಡ್ಡ ಮಟ್ಟದ ಆಂದೋಲನವಾಗಿ ನಡೆದ ಹಡಿಲು ಭೂಮಿ ಕೃಷಿ ನಾಟಿಯ ಸಮಾರೋಪ ಸಮಾರಂಭ ಇವತ್ತು ಹಾರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು. ಹಾರಾಡಿ ಗ್ರಾಮದ ಹೊನ್ನಾಳ ಕಂಬಳಗದ್ದೆ ಮನೆ ಬಳಿಯ ಹಡಿಲು ಭೂಮಿ ಕೃಷಿ ನಾಟಿಯ ಕಡೆಯ ನಟ್ಟಿಯಲ್ಲಿ ಉಡುಪಿಯ ಪತ್ರಕರ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮತ್ತು ಕೃಷಿಕರೂ ಆದ ವಿಜಯ ಕರ್ನಾಟಕ ವರದಿಗಾರ ಅಜಿತ್ ಆರಾಡಿ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೆಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.
ನಾಟಿ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಉಡುಪಿಯ ಪತ್ರಕರ್ತರು ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ನಿತ್ಯ ವರದಿಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರು ಇವತ್ತು ಗದ್ದೆಗಿಳಿದು ನಾಟಿ ಮಾಡುವ ಮೂಲಕ ರಿಲ್ಯಾಕ್ಸ್ ಆದರು.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ,ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ, ಉಪಾಧ್ಯಕ್ಷರಾದ ಜಯಂತಿ ಪೂಜಾರಿ, ಸ್ಥಳೀಯರಾದ ಎ. ಬಾಲಕೃಷ್ಣ ಶೆಟ್ಟಿ, ಅಬು ಸಾಹೇಬ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಡಾll. ಶಂಕರ್ ಹಾಗೂ ಹಾರಾಡಿ ಗ್ರಾಮ ಪಂಚಾಯತ್ ಸದಸ್ಯರು, ಭೂ ಮಾಲಕರು, ಸ್ಥಳೀಯ ಕೃಷಿಕರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
01/08/2021 02:24 pm