ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿದೆ. ಇಂದು ಶಾಸಕರಾದ ಕೆ ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ಹಡಿಲು ಭೂಮಿ ಕೃಷಿ ನಾಟಿ ಮಾಡಿದ ಗದ್ದೆಗಳ ಬೆಳೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಹಾವಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಗುರುರಾಜ್, ಕಿರಣ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.
Kshetra Samachara
18/08/2021 01:22 pm