ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬೈಂದೂರು ತಾಲೂಕು ವ್ಯಾಪ್ತಿಯ ರೈತರಿಂದ ಬೃಹತ್ ಪ್ರತಿಭಟನೆ

ಬೈಂದೂರು: ಬೈಂದೂರು ತಾಲೂಕು ತಹಶೀಲ್ದಾರ್ ಕಛೇರಿ ಮುಂಭಾಗ ಬೈಂದೂರು ತಾಲೂಕು ವ್ಯಾಪ್ತಿಯ ರೈತರಿಂದ ಬೃಹತ್ ಪ್ರತಿಭಟನೆ ನಡೆಯಿತು.ತಗರ್ಸೆ ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿದ ಹಿನ್ನಲೆಯಲ್ಲಿ ಈ ಪ್ರತಿಭಟನೆ ನಡೆದಿದೆ.ಈ ಮೊದಲು ತಗರ್ಸೆ ಗ್ರಾಮ ಬೈಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿತ್ತು.ಇದೀಗ ರೈತರ ಅಭಿಪ್ರಾಯ ಪಡೆಯದೆ ತಗರ್ಸೆಯನ್ನು ಪಟ್ಟಣ ಪಂಚಾಯತ್ ಗೆ ಸೇರಿಸಿದ ಹಿನ್ನಲೆಯಲ್ಲಿ ಈ ಭಾಗದ ರೈತರು ಆಕ್ರೋಶಗೊಂಡಿದ್ದಾರೆ.

ತಗರ್ಸೆ ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿದರೆ ತಮಗೆ ತೊಂದರೆಯಾಗುತ್ತದೆ.ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

26/08/2021 12:21 pm

Cinque Terre

11.27 K

Cinque Terre

0

ಸಂಬಂಧಿತ ಸುದ್ದಿ