ಮುಲ್ಕಿ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 75 ವಾರಗಳ ಸರಣಿ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಸಹಯೋಗದಲ್ಲಿ "ಕೃಷಿಕರಿಗಾಗಿ ಮಾಹಿತಿ ಕಾರ್ಯಾಗಾರ" ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಡೆಯಿತು.
ಕೃಷಿಕ ಪ್ರತಿನಿಧಿಯಾಗಿ ಹರೀಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರಿಗೆ ಕೃಷಿಗೆ ಪೂರಕವಾದ ಹಾಗೂ ಬೆಳೆ ನಾಶದ ಬಗ್ಗೆ ಮಾಹಿತಿ ನೀಡಿ ಸರಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು.
ಪಂಚಾಯತ್ ಉಪಾಧ್ಯಕ್ಷೆ ಶ ಶಶಿಕಲಾ, ಪಂಚಾಯತ್ ಸದಸ್ಯೆ ಪದ್ಮಿನಿ ಶೆಟ್ಟಿ, ವೇದಾವತಿ, ಗೀತಾ ಉಪಸ್ಥಿತರಿದ್ದರು. ನರೇಗಾ ಯೋಜನೆಯಡಿ ಕೃಷಿಕರಿಗೆ ಸೌಲಭ್ಯಗಳು, ಉದ್ಯೋಗ ಚೀಟಿ ಪಡೆಯುವ ಬಗ್ಗೆ ಹಾಗೂ ಫಲಾನುಭವಿ ಆಯ್ಕೆಯ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಕುಡ್ತಡ್ಕ ವಿಸ್ತ್ರತ ಮಾಹಿತಿ ನೀಡಿದರು.
ಸಹಾಯಕ ಕೃಷಿ ಅಧಿಕಾರಿ ಮಹಮ್ಮದ್ ಬಶೀರ್ ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಕೃಷಿಕರ ಎಲ್ಲಾ ಸಂದೇಹಗಳಿಗೆ ಉತ್ತರ ನೀಡಿದರು.
Kshetra Samachara
27/08/2021 03:12 pm