ಮುಲ್ಕಿ:ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು,
ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ, ದ. ಕ ಜಿಲ್ಲೆಮಾರ್ಗದರ್ಶನದಲ್ಲಿ ಹಳೆಯಂಗಡಿಯ ತೋಕೂರು, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಭಾಂಗಣದಲ್ಲಿ "75 ಮನೆಗಳಲ್ಲಿ ಸಸಿ ವಿತರಿಸಿ, ನೆಡುವ ಅಭಿಯಾನ" ಎಂಬ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಪಡುಪಣಂಬೂರು ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ'ಸೋಜಾ ಮಾತನಾಡಿ "ಆಮ್ಲಜನಕದ ಕೊರತೆಯು ಈಗಿನ ಕೊರೊನಾ ಸಂಕಷ್ಟದ ಸಮಯದಲ್ಲಿ ಎಲ್ಲರಿಗೂ ಮನವರಿಕೆ ಆಗುವಂತೆ ಮಾಡಿದೆ. ಈ ನಿಟ್ಟಿನಲ್ಲಿ ನೈಸರ್ಗಿಕ ಆಮ್ಲಜನಕ ಸಾಂದ್ರಕವಾಗಿರುವ ಸಸ್ಯಗಳನ್ನು ಬೆಳೆಸಿ ರಕ್ಷಿಸುವ ಯೋಜನೆಯು ಅತ್ಯುತ್ತಮವಾಗಿ ಮೂಡಿ ಬಂದಿದೆ" ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಪಂ ಅಧ್ಯಕ್ಷೆ ಮಂಜುಳಾ ವಹಿಸಿದ್ದರು. ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ
ಜಿತೇಶ್ ಪಿ. ಬಂಟ್ವಾಳ, ಹಳೆಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಸ್ಪೋರ್ಟ್ಸ್ ಕ್ಲಬ್ ನ ಗೌರವ ಅಧ್ಯಕ್ಷ ಮೋಹನ್ ದಾಸ್, ಅಧ್ಯಕ್ಷ ಸಂತೋಷ್ ದೇವಾಡಿಗ ಹಾಗೂ ಮಹಿಳಾ ಕಾರ್ಯಧ್ಯಕ್ಷೆ, ಶೋಭಾ ಅಂಚನ್ ಉಪಸ್ಥಿತರಿದ್ದ ಅತಿಥಿಗಳಿಗೆ ಸಾಂಕೇತಿಕವಾಗಿ ಸಸಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು ಹಾಗೂ ಹಸಿರು ಬೆಳೆಸೋಣ-ಉಸಿರು ಹಂಚೋಣ ಎಂಬ ಸಸಿ ನೆಟ್ಟು ಬೆಳೆಸಿ ಪ್ರಕೃತಿ ಸಂರಕ್ಷಿಸುವ ಉದಾತ್ತ ಕಾರ್ಯದಲ್ಲಿ ಕೈ ಜೋಡಿಸುವ ವಿನಂತಿಯುಳ್ಳ ಜಾಗೃತಿ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್, ಸಂತೋಷ್ ಕುಮಾರ್, ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ಮತ್ತಿತರರು ಉಪಸ್ಥಿತರಿದ್ದರು. ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ವಂದಿಸಿದರು. ಮಹಿಳಾ ಸದಸ್ಯೆ ಗೀತಾ ಸದಾನಂದ ಕಾರ್ಯಕ್ರಮದ ನಿರೂಪಣೆ ಮಾಡಿದರು.
Kshetra Samachara
30/08/2021 02:51 pm