ಮುಲ್ಕಿ: ಕಿನ್ನಿಗೋಳಿ ಸಮೀಪದ ಐಕಳ ಗ್ರಾ ಪಂ. ವ್ಯಾಪ್ತಿಯ ಉಳೆಪಾಡಿ ದ.ಕಜಿಪಹಿಪ್ರಾಶಾಲೆಯಲ್ಲಿ ಕರ್ನಾಟಕ ಜೀವ ವೈವಿದ್ಯ ಮಂಡಳಿ ದ.ಕ ಜಿ. ಪಂ, ತಾ ಪಂ., ಮಂಗಳೂರು ಸಾಮಾಜಿಕ ಅರಣ್ಯ ಇಲಾಖೆ ದಕ ಜಿಪ ಮಂಗಳೂರು ಹಾಗೂ ಐಕಳ ಗ್ರಾಮ ಪಂಚಾಯತ್ ನಲ್ಲಿ ಸಹಯೋಗದಲ್ಲಿ ತಾಲೂಕು ಮಟ್ಟದ ಅಂತರಾಷ್ಟ್ರೀಯ ಜೀವ ವೈವಿಧ್ಯ ದಿನಾಚರಣೆ ಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎನ್ ಜಿ. ನಾಗರಾಜ ದೀಪ ಬೆಳಗಿಸಿ ಉದ್ಘಾಟಿಸಿದರು.
ಗ್ರಾ ಪಂ ನ ಅಧ್ಯಕ್ಷೆ ಸುಗುಣ ಜೀವ ವೈವಿಧ್ಯ ಕಾರ್ಯಕ್ರಮಕ್ಕೆ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೆನರಾ ಕಾಲೇಜಿನ ಉಪನ್ಯಾಸಕರಾದ ಮನೋಹರ್ ಎಸ್ ರವರು ಜೀವ ವೈವಿದ್ಯತೆಯ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ , ಉಪವಲಯ ಅರಣ್ಯ ಅಧಿಕಾರಿ, ಕು |ರೋಹಿಣಿ ಇಲಾಖಾ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಎಸ್ ಡಿ ಎಮ್ ಸಿ ಅಧ್ಯಕ್ಷರು, ಸಂಜೀವಿನಿ ಒಕ್ಕೂಟ ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.
ಸಾರ್ವಜನಿಕರಿಗೆ ಸಾಮಾಜಿಕ ಅರಣ್ಯ ಇಲಾಖಾ ವತಿಯಿಂದ ಗಿಡಗಳನ್ನು ವಿತರಿಸಲಾಯಿತು. ಪಂ.ಅ.ಅಧಿಕಾರಿ ನಾಗರತ್ನ ಕಾರ್ಯಕ್ರಮ ನಿರೂಪಿಸಿದರು,ಕಾರ್ಯದರ್ಶಿ ವಂದಿಸಿದರು.
Kshetra Samachara
02/09/2021 05:41 pm