ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಅಸೋಡು-ಬಂಡ್ಸಾಲೆಯಲ್ಲಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆಗೊಂಡಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸೇವಾ ಕೇಂದ್ರಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಡಾ. ಹೆಗ್ಗಡೆಯವರು, ಅನಿಶ್ಚಿತತೆಯಿಂದ ರೈತರಿಂದು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಅನಗತ್ಯ ಖರ್ಚಿಗೆ ನಿಯಂತ್ರಣ, ಕೃಷಿಯಲ್ಲಿ ಸುಧಾರಿತ ಪದ್ಧತಿ, ಯಂತ್ರೋಪಕರಣ ಸಮರ್ಪಕ ಬಳಕೆಯಿಂದ ಕೃಷಿ ಲಾಭದಾಯಕವಾಗಿಸಲು ಸಾಧ್ಯವಿದೆ. ಕೊರೊನಾ ಕಾಡಿದರೂ ಅನ್ನದಾತ ಕರ್ಮಯೋಗ ಬಿಡಲಿಲ್ಲ, ಹಾಗಾಗಿ ಆಹಾರದ ಸಮಸ್ಯೆ ಕಾಡಲಿಲ್ಲ. ಕೃಷಿ ಅವಲಂಬಿತರನ್ನು ಇನ್ನಷ್ಟು ಉತ್ತೇಜಿಸುವ ಕಾರ್ಯ ಆಗಲಿ ಎಂದರು.
ಜನಜಾಗೃತಿ ವೇದಿಕೆ ಕುಂದಾಪುರದ ಸ್ಥಾಪಕ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಳಾವರ ಗ್ರಾಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ರೂಪಾ ಜೆ. ಮಾಡ, ಸುಜಿತ್ ಕುಮಾರ್ ಶೆಟ್ಟಿ, ಕರಾವಳಿ ಪ್ರಾದೇಶಿಕ ಕಚೇರಿ ನಿರ್ದೇಶಕ ವಸಂತ ಸಾಲ್ಯಾನ್ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್ ಪ್ರಾಸ್ತಾವಿಕ ಮಾತನಾಡಿದರು. ರಶ್ಮಿ ಪ್ರಾರ್ಥನೆ ಹಾಡಿದರು. ಕೃಷಿ ಯಂತ್ರೋಪಕರಣ ವಿಭಾಗ ಪ್ರಾದೇಶಿಕ ನಿರ್ದೇಶಕ ಅಬ್ರಹಾಂ ಎಂ.ಕೆ ಸ್ವಾಗತಿಸಿದರು. ಕುಂದಾಪುರ ತಾಲೂಕು ಕೃಷಿ ಅಧಿಕಾರಿ ಚೇತನ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.
Kshetra Samachara
21/10/2021 01:33 pm