ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ರೈತರು ಭಾರಿ ಸಂಖ್ಯೆಯಲ್ಲಿ ಸೇರಿದ್ದು, ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜನಪರ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬ್ರಹ್ಮಾವರ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ಸಭೆಯಲ್ಲಿ ಜಿಲ್ಲೆಯ ರೈತಾಪಿ ವರ್ಗ, ರೈತ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ. ಮುಖ್ಯವಾಗಿ ಭತ್ತಕ್ಕೆ ಕನಿಷ್ಠ 2500 ರೂ. ಬೆಂಬಲ ಬೆಲೆ ನೀಡಲು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ರೈತ ಸಂಘಟನೆಗಳು ಭತ್ತಕ್ಕೆ ಬೆಂಬಲ ಬೆಲೆ ನಿಗದಿ ಪಡಿಸುವಂತೆ ಶುಕ್ರವಾರಕ್ಕೆ ಗಡುವು ನೀಡಿದ್ದವು. ನಿನ್ನೆಗೆ ಗಡುವು ಮುಗಿದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಬೀದಿಗಿಳಿದಿವೆ.
Kshetra Samachara
06/11/2021 11:23 am