ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.26 ಕ್ಕೆ ಐಕಳ ಕಾಂತಾಬಾರೆ – ಬೂದಾಬಾರೆ ಕಂಬಳ

ಮುಲ್ಕಿ:ದೇವರ ಕಂಬಳವೆಂದು ಪ್ರಸಿದ್ದಿ ಪಡೆದ ಐಕಳ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ ಫೆ.26 ರಂದು ನಡೆಯಲಿದೆ ಐಕಳ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಹೇಳಿದರು.

ಕಂಬಳ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ ಅವರು ಜ. 30 ರಂದು ನಡೆಯಬೇಕಾಗಿದ್ದ ಕಂಬಳವು ಕೋವಿಡ್ ಕಾರಣದಿಂದ ದಿನಾಂಕ ಬದಲಾವಣೆ ಮಾಡಲಾಗಿದ್ದು ಫೆ.26 ರಂದು ಐಕಳ ಕಂಬಳ ನಡೆಯಲಿದ್ದು ಐಕಳೋತ್ಸವವಾಗಿ ಆಚರಿಸಲಾಗುತ್ತಿದ್ದು ಪೂರ್ವಾಭಾವಿಯಾಗಿ ಗ್ರಾಮೀಣ ಕ್ರೀಡಾ ಕೂಟ ನಡೆಯಲಿದೆ ಎಂದರು.

ಕಂಬಳದ ದಿನ ಸಂಜೆ ಸಭಾ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ರಾಜಕೀಯ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಐಕಳ ಕಂಬಳದಲ್ಲಿ ಡೋಲು ವಾದಕರಾಗಿ ಸೇವೆ ಸಲ್ಲಿಸುತ್ತಿದ್ದು ಕೆಲವು ತಿಂಗಳ ಹಿಂದೆ ನಿಧನರಾಗಿದ್ದ ಮುದರ , ಗೋಪಾಲ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಐಕಳಬಾವ ಕಾಂತಾಬಾರೆ-ಬೂದಾಬಾರೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಚಿತ್ತರಂಜನ ಭಂಡಾರಿ ಐಕಳಬಾವ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸಂತೋಷ್ ಕುಮಾರ್ ಹೆಗ್ಡೆ , ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/01/2022 08:55 pm

Cinque Terre

21.15 K

Cinque Terre

0

ಸಂಬಂಧಿತ ಸುದ್ದಿ