ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ಯುವಜನರು ಕೃಷಿ ಮೇಳ ಪ್ರೋತ್ಸಾಹಿಸಿ; ಸಂಸದ ನಳಿನ್ ಕಳಕಳಿ

ಮುಲ್ಕಿ: ಯುವ ಜನಾಂಗದಲ್ಲಿ ಕೃಷಿ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದ್ದು, ಯುವಕರು ಮುಂದೆ ಬಂದು ಕೃಷಿಮೇಳವನ್ನು ಪ್ರೋತ್ಸಾಹಿಸಬೇಕು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಮುಲ್ಕಿ ಸಮೀಪದ ಕೊಲ್ನಾಡು ಕೃಷಿ ಮೇಳದ 'ಕೃಷಿ ಸಿರಿ- 2022' ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೃಷಿ ಸವಲತ್ತು ಒದಗಿಸುತ್ತಿದ್ದು, ಕೃಷಿಕರು ಪ್ರಯೋಜನ ಪಡೆಯಬೇಕೆಂದರು.

ಬಳಿಕ ನಳಿನ್, ಕೃಷಿ ಮೇಳ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕೃಷಿಮೇಳ ವತಿಯಿಂದ ಅಧ್ಯಕ್ಷ ವಿಜಯ ಶೆಟ್ಟಿ, ಸಂಸದರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶಾಸಕ ಉಮಾನಾಥ ಕೋಟ್ಯಾನ್, ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಕೃಷಿ ಮೇಳ ಅಧ್ಯಕ್ಷ ವಿಜಯ ಶೆಟ್ಟಿ, ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

12/03/2022 02:13 pm

Cinque Terre

7.8 K

Cinque Terre

0

ಸಂಬಂಧಿತ ಸುದ್ದಿ