ಬ್ರಹ್ಮಾವರ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ವತಿಯಿಂದ ಸಮಗ್ರ ಕೃಷಿ ಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತ ಹಾಗು ರೈತ ಮಹಿಳೆಯರನ್ನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುತ್ತಿದ್ದು ಉಡುಪಿ ಜಿಲ್ಲೆಯ ಪ್ರಗತಿಪರ ರೈತ/ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಯನ್ನು ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲಾಗುವುದು. ಆ ಪ್ರಯುಕ್ತ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್, ಉಡುಪಿಯಲ್ಲಿ ಪಡೆದುಕೊಂಡು ದಿನಾಂಕ 20.10.2022 ರ ಒಳಗೆ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ್, ಉಡುಪಿಯ ಕಚೇರಿಗೆ ನೀಡಬೇಕಾಗಿ ಕೋರಲಾಗಿದೆ.
Kshetra Samachara
08/10/2022 04:02 pm