ಮಂಗಳೂರು: ಬೆಂಗಳೂರು ಮಾದರಿಯಲ್ಲಿ ಮಂಗಳೂರು ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂಬ ಪತ್ರಕರ್ತರಿಬ್ಬರ ಮನವಿಗೆ ರಾಜ್ಯ ಸಾರಿಗೆ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮೂರು ಸಾರಿಗೆ ಬಸ್‌ಗಳ ಸಂಚಾರದ ಕ್ರಮಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರು ಮಾದರಿಯಲ್ಲಿ ಮಂಗಳೂರು ನಗರದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾರಿಗೆ ಬಸ್‌ಗಳನ್ನು ಕಾರ್ಯಾಚರಿಸಬೇಕೆಂದು ಬೆಂಗಳೂರು ಸಾರಿಗೆ ಇಲಾಖೆಯ ಸರಕಾರದ ಕಾರ್ಯದರ್ಶಿಗೆ ಪತ್ರಕರ್ತರು ಮನವಿ ಮಾಡಿದ್ದರು. ಈ ಕೋರಿಕೆಯನ್ನು ದ.ಕ.ಜಿಲ್ಲಾಧಿಕಾರಿಯೂ ನೀಡಿದ್ದರು. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮಂಗಳೂರು ನಗರದಿಂದ ಮಂಗಳೂರು ಏರ್‌ಪೋರ್ಟ್‌ವರೆಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬೆಂ.ಮ.ಸಾ.ಸಂಸ್ಥೆಯಿಂದ ಮೂರು ಬಸ್ ಗಳನ್ನು ಹಸ್ತಾಂತರ ಮಾಡಬೇಕು. ಈ ಮೂಲಕ ಪಡೆದ ಬಸ್‌ಗಳನ್ನು ಕ.ರಾ.ರ.ಸಾ. ನಿಗಮದಿಂದ ಕಾರ್ಯಾಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತು ಮುಂದಿನ ಮಂಡಳಿಗಳ ಸಭೆಯಲ್ಲಿ ಮಂಡಿಸಿ ಸ್ಥಿರೀಕರಣ ಪಡೆಯುವಂತೆ ಕ.ರಾ.ರ.ಸಾ.ನಿಗಮ, ಬೆಂ.ಮ.ಸಾ.ಸಂಸ್ಥೆಗೆ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪುಷ್ಪಾ ವಿ.ಎಸ್. ನಿರ್ದೇಶಿಸಿದ್ದಾರೆ.
Kshetra Samachara
24/06/2022 10:54 pm