ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ರೈತರೊಂದಿಗೆ ನಿಲ್ಲುವ,ರಕ್ಷಿಸುವ ಜವಾಬ್ದಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಮೇಲಿದೆ;ಡಾ.ಎಂ.ಎನ್. ರಾಜೇಂದ್ರಕುಮಾರ್

ಮಂಗಳೂರು:ರೈತಪರ ಸಂಸ್ಥೆಯಾಗಿ ರೈತರೊಂದಿಗೆ ನಿಲ್ಲುವ, ಅವರನ್ನು ರಕ್ಷಿಸುವ ಜವಾಬ್ದಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಮೇಲಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು.

ಎಸ್ ಸಿಡಿಸಿಸಿ ಬ್ಯಾಂಕ್ ಮತ್ತು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್ ರವರ 142ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳು ಅಡಿಕೆ ಕೃಷಿಗೆ ದೊಡ್ಡ ಪ್ರಮಾಣದಲ್ಲಿ ಸಾಲ ನೀಡುತ್ತಿದೆ. ಶೇ.100ರಷ್ಟು ಕೃಷಿ ಸಾಲ ಮರುಪಾವತಿ ಆಗುತ್ತಿದೆ. ಅಡಿಕೆಯ ಹಳದಿ ರೋಗಕ್ಕೆ ಸಂಬಂಧಿಸಿದಂತೆ ಸಂಶೋಧನೆಗೆ ರಾಜ್ಯ ಸರಕಾರ ಈಗಾಗಲೇ 25 ಕೋಟಿ ರೂ. ಬಿಡುಗಡೆ ಮಾಡಿದೆ. ಆ ಹಣ ಎಲ್ಲಿಗೆ ಹೋಗಿದೆ ಗೊತ್ತಿಲ್ಲ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಮೊಳಹಳ್ಳಿ ಶಿವರಾಯರು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಬೆಳೆಸಿ ಸಹಕಾರಿ ಕ್ಷೇತ್ರಕ್ಕೆ ಅವರು ಬಲಾಢ್ಯ ತಳಪಾಯ ಹಾಕಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು.

ಮುಖ್ಯ ಅತಿಥಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ದೇಶದಲ್ಲೇ ಅತ್ಯುತ್ತಮ ಸಹಕಾರಿ ಬ್ಯಾಂಕ್ ಆಗಿ ಮೂಡಿ ಬಂದಿದೆ. ಈ ಬ್ಯಾಂಕ್ ಉಭಯ ಜಿಲ್ಲೆಗಳಲ್ಲಿ ಕೃಷಿಕರಿಗೆ ಬೆನ್ನೆಲುಬಾಗಿ ನಿಂತಿದೆ. ಸಹಕಾರ ಸಂಘಗಳು ಇದರ ಪ್ರಯೋಜನ ಪಡೆಯುತ್ತಿದೆ ಎಂದರು.

Edited By :
Kshetra Samachara

Kshetra Samachara

04/08/2022 07:40 pm

Cinque Terre

2.87 K

Cinque Terre

0

ಸಂಬಂಧಿತ ಸುದ್ದಿ