ಮಲ್ಪೆ: ಮಲ್ಪೆ ಸೀ ವಾಕ್ ಬಳಿಯ ಸಂಜೀವಿನಿ ತ್ರಿಶಕ್ತಿ ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮಳಿಗೆಯನ್ನು ನಗರ ಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಸೇರಿದಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ನವೀನ್ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮಳಿಗೆ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ವೈ.ನವೀನ್ ಭಟ್, ಸಂಜೀವಿನಿ ಸ್ವಸಹಾಯ ಸಂಘಗಳ ಮೂಲಕ ಸಂಜೀವಿನಿ ಎನ್ನುವ ಉತ್ಪನ್ನ ಇಡೀ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು. ದೊಡ್ಡ ದೊಡ್ಡ ಬ್ರಾಂಡ್‌ಗಳಂತೆ ಜನರು ಸಂಜೀವಿನಿ ಉತ್ಪನ್ನಗಳನ್ನು ಹುಡುಕಿಕೊಂಡು ಬರುವಂತಾಗಬೇಕು. ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು, ಅದಕ್ಕೆ ಬೇಕಾದ ಪ್ರಚಾರ ಮತ್ತು ಪ್ರೋತ್ಸಹ ನೀಡುವ ಕೆಲಸವನ್ನು ಜಿಲ್ಲಾಡಳಿತ ಸದಾ ನೀಡಲಿದೆ ಎಂದರು. ಕಾರ್ಯಕ್ರಮ ದಲ್ಲಿ ಎನ್‌ಆರ್‌ಎಲ್‌ಎಮ್ ಯೋಜನೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/03/2022 03:59 pm