ಉಡುಪಿ: ಪವಿತ್ರ ವಸ್ತ್ರ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 13 ರಿಂದ 16 ರ ವರೆಗೆ ಬೆಳಿಗ್ಗೆ 10 ರಿಂದ 8 ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಪಡಿಯಚ್ಚು ಮುದ್ರಣ ಹಾಗೂ ಶಿಬೋರಿ ಬಣ್ಣಗಾರಿಕೆಯ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.ಅದೇ ದಿನಾಂಕದಂದು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲೂ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿದೆ ಎಂದು ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಮಾರುಕಟ್ಟೆ ವ್ಯವಸ್ಥಾಪಕಿ ಪದ್ಮಶ್ರೀ ಮಾಹಿತಿ ನೀಡಿದ್ದಾರೆ.
ಉಡುಪಿಯಲ್ಲಿ ಪ್ರದರ್ಶನ ಮತ್ತು ಮಾರಾಟದ ಬಳಿಕ ಸೆಪ್ಟೆಂಬರ್ 16ರಿಂದು ಕಾರ್ಕಳ ತಾಲೂಕಿನ ಮಾಳ ಗ್ರಾಮದ ರಾಮ ಮಂದಿರದಲ್ಲಿ ಬೆಳಿಗ್ಗೆ 10 ರಿಂದ 6 ರವರೆಗೆ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿದೆ.
ಸೆಪ್ಟೆಂಬರ್ 13ರಂದು ರಂಗಕರ್ಮಿ ಪ್ರಸನ್ನರವರು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿ. ಮುರಾರಿ ಬಲ್ಲಾಳರ ನೆನಪಿನಲ್ಲಿ ಸ್ವರಾಜ್ಯ ಹಾಗೂ ಗ್ರಾಮೋದ್ಯೋಗ ಕುರಿತಂತೆ ಮಾತನಾಡಲಿದ್ದಾರೆ ಎಂದು ಪದ್ಮಶ್ರೀ ಮಾಹಿತಿ ನೀಡಿದರು.
ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷೆ ಗೌರಮ್ಮ ,ಚೈತ್ರ ,ಮಂಜುನಾಥ್ ಕಾಮತ್ ,ಸುಚಿತ್ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Kshetra Samachara
11/09/2021 12:53 pm