ಮುಲ್ಕಿ: ದೇವರ ಸೇವೆಯಿಂದ ವಿಶ್ವದಲ್ಲೇ ಹಬ್ಬಿರುವ ಕೊರೊನ ಮಹಾಮಾರಿಯನ್ನು ನಿರ್ಮೂಲನಗೊಳಿಸಿ ಶಾಂತಿ ನೆಲೆಸಲಿ ಎಂದು ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ತಂತ್ರಿಗಳಾದ ವೇದವ್ಯಾಸ ತಂತ್ರಿ ಆಶೀರ್ವಚನ ನೀಡಿದರು.
ಅವರು ಲೋಕದ ಸಕಲ ಧುರಿತ ನಿವಾರಣಾ ನಿಮಿತ್ತ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ನಡೆಯುವ ಆ. 16ರಂದು ನಡೆಯುವ "ಲಕ್ಷ ತುಳಸಿ ಅರ್ಚನೆ"ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವೇದಮೂರ್ತಿ ಶ್ರೀಕಾಂತ್ ಭಟ್ ಮಾತನಾಡಿ ಸೋಣ ಸಂಕ್ರಮಣ ದಿನ ಶಿಮಂತೂರು ಶ್ರೀ ಆದಿ ಜನಾರ್ದನ ದೇವರಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ವಿಶೇಷ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಸುವ ಬಗ್ಗೆ ಗ್ರಾಮಸ್ಥರ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ತೀರ್ಮಾನ ಕೈಗೊಳ್ಳಲಾಗಿದ್ದು ಗ್ರಾಮಸ್ಥರ ಸಹಕಾರ ಬೇಕು ಎಂದರು.
ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ, ಮುರಳಿಧರ ಭಂಡಾರಿ, ವಿಷ್ಣುಮೂರ್ತಿ ಭಟ್ ಮತ್ತಿತರರು ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಗ್ರಾಪಂ ಸದಸ್ಯರಾದ ಕೃಷ್ಣ ಅಂಗರಗುಡ್ಡೆ, ವಿಕಾಸ್ ಶೆಟ್ಟಿ, ವೇದಾವತಿ, ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್, ಕರುಣಾಕರ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು. ಮೋಹನ್ ಕೋಟ್ಯಾನ್ ಶಿಮಂತೂರು ಕಾರ್ಯಕ್ರಮ ನಿರೂಪಿಸಿದರು
Kshetra Samachara
31/07/2021 07:21 pm