ಮುಲ್ಕಿ: ಕಿನ್ನಿಗೋಳಿ ಸಮೀಪದ ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಎಳತ್ತೂರು ಫ್ರೆಂಡ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ಕೋವಿಡ್ ಲಸಿಕೆ ಶಿಬಿರವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಳತ್ತೂರು. ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ಹೆಗ್ಡೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರು ಕೊರೊ ನ ಮೂರನೇ ಅಲೆಯ ಬಗ್ಗೆ ಎಚ್ಚರಿಕೆವಹಿಸಿ ಲಸಿಕೆ ಪಡೆದು ಸುರಕ್ಷಿತವಾಗಿರಿ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಯೀಶ್ ಚೌಟ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರದೀಪ್ ಕುಮಾರ್, ಮಾಜೀ ತಾಪಂ ಸದಸ್ಯ,ದಿವಾಕರ ಕರ್ಕೇರ, ಕಿನ್ನಿಗೋಳಿ ಗ್ರಾಪಂ ಮಾಜಿ ಸದಸ್ಯಪ್ರಕಾಶ್ ಹೆಗ್ಡೆ,ಎಳತ್ತೂರು ಫ್ರೆಂಡ್ಸ್ ಕ್ಲಬ್. ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಮಹಿಳಾ ಘಟಕದ ಅಧ್ಯಕ್ಷೆ ವೀಣ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 150 ಮಂದಿಗೆ ಉಚಿತ ಕೋವಿಡ್ ಲಸಿಕೆ ನೀಡಲಾಯಿತು.
Kshetra Samachara
03/08/2021 04:19 pm