ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ರೈಲ್ವೆ ನಿಲ್ದಾಣದಲ್ಲಿ ಅನ್ಯ ರಾಜ್ಯ ಪ್ರಯಾಣಿಕರ ಕೊರೊನಾ ಪರೀಕ್ಷೆ ಮೂಲಕ ತೀವ್ರ ತಪಾಸಣೆ

ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ಚುರುಕುಗೊಂಡಿದ್ದು ಅನ್ಯ ರಾಜ್ಯಗಳಿಂದ ಬರುವ ಪ್ರಯಾಣಿಕರ ತೀವ್ರ ನಿಗಾ ಇರಿಸಲಾಗಿದೆ. ಮುಲ್ಕಿ ರೈಲ್ವೆ ನಿಲ್ದಾಣದಲ್ಲಿ ಕಳೆದ ಮೂರು ದಿನಗಳಿಂದ ಕೊರೊನಾ ತಪಾಸಣೆ ತೀವ್ರಗೊಂಡಿದ್ದು ಬೆಳಗ್ಗೆ ಮುಂಬೈ ನಿಂದ ಮತ್ಸ್ಯಗಂಧ ರೈಲಿನಲ್ಲಿ ಬರುವ ಅನ್ಯರಾಜ್ಯದ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಸ್ಥಳದಲ್ಲಿ ಕೆಮ್ರಾಲ್ ಆರೋಗ್ಯ ಕೇಂದ್ರ ಹಾಗೂ ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದು ಶುಕ್ರವಾರ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಆರೋಗ್ಯಾಧಿಕಾರಿ ಡಾ. ಕಿಶೋರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮುಲ್ಕಿ ತಾಲೂಕು ಹಾಗೂ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ತಹಶಿಲ್ದಾರ್ ಕಮಲಮ್ಮ ಹಾಗೂ ಮುಖ್ಯಾಧಿಕಾರಿ ಚಂದ್ರಪೂಜಾರಿ ನೇತೃತ್ವದಲ್ಲಿ ಕೋವಿಡ್ ತಪಾಸಣೆ ಬಿಗಿಗೊಳಿಸಿದ್ದು ನಾಗರಿಕರಿಗೆ ಸರಕಾರದ ಕೊರೊನ ನಿಯಮಗಳನ್ನು ಪಾಲಿಸಿಕೊಂಡು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

Edited By : PublicNext Desk
Kshetra Samachara

Kshetra Samachara

06/08/2021 06:19 pm

Cinque Terre

16.07 K

Cinque Terre

0