ಮುಲ್ಕಿ:ಲಯನ್ಸ್ ಕ್ಲಬ್ , ಲಿಯೋ ಕ್ಲಬ್ ಮುಲ್ಕಿ, ಲಯನ್ಸ್ ಕ್ಲಬ್ ಕಿನ್ನಿಗೋಳಿ, ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು, ಶ್ರೀ ದುರ್ಗಾ ಶಕ್ತಿ ಮಹಿಳಾ ಮಂಡಳಿ (ರಿ) ಕೆರೆಕಾಡು ಬೆಳ್ಳಾಯರು ಜಂಟಿ ಆಶ್ರಯದಲ್ಲಿ ಉಚಿತ ಕೋವಿಡ್ ಪ್ರಥಮ ಲಸಿಕಾ ಕಾರ್ಯಕ್ರಮ ಕೆರೆಕಾಡು ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜೀ ಉಪಾಧ್ಯಕ್ಷೆ ಕಸ್ತೂರಿ ಪಂಜ ಉದ್ಘಾಟಿಸಿ ಮಾತನಾಡಿ ಕೋವಿಡ್ ಲಸಿಕೆ ಪಡೆದು ಕೊರೊನಾ ಮೂರನೇ ಅಲೆಯ ಬಗ್ಗೆ ಎಚ್ಚರಿಕೆ ವಹಿಸಿ ಸುರಕ್ಷಿತವಾಗಿರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಸದಸ್ಯರಾದ ಕಿಶೋರ್ ಶೆಟ್ಟಿ ಬಪ್ಪನಾಡು, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಹಿಲ್ಡಾ ಡಿಸೋಜ, ಪಂಚಾಯತ್ ಸದಸ್ಯರಾದ ತುಳಸಿ, ಪವಿತ್ರ, ಕೆಮ್ರಾಲ್ ಆರೋಗ್ಯ ಕೇಂದ್ರದ ಮಾರ್ಗರೇಟ್ ಸುದರ್ಶನಿ, ಸಂಧ್ಯಾ, ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ನ ಅಧ್ಯಕ್ಷ ನವೀನ್ ಶೆಟ್ಟಿಗಾರ್, ದುರ್ಗಾ ಶಕ್ತಿ ಮಹಿಳಾ ಮಂಡಲ (ರಿ)ಅಧ್ಯಕ್ಷೆ ಗಾಯತ್ರಿ, ಶಾಲಾ ಮುಖ್ಯೋಪಾಧ್ಯಾಯ ಭುವನೇಶ್ವರಿ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ನವೀನ್ ಸ್ವಾಗತಿಸಿ ಲಯನ್ಸ್ ಕ್ಲಬ್ ಸದಸ್ಯರಾದ ಲಕ್ಷ್ಮಣ್ ಸಾಲ್ಯಾನ್ ಪುನರೂರು ಕಾರ್ಯಕ್ರಮವನ್ನು ನಿರೂಪಿಸಿದರು.
Kshetra Samachara
06/08/2021 10:23 pm